ಡಿಜಿಟಲ್ ಡೆಸ್ಕ್ : 2025-26 ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನವೀನ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಪೋಷಕರ ಆದಾಯ ಮಿತಿ ರೂ.2.50 ಲಕ್ಷದೊಳಗಿರಬೇಕು. ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ(ಎಸ್‌ಎಸ್‌ಪಿ ಪೋರ್ಟಲ್) ಮೂಲಕ ವೆಬ್‌ಸೈಟ್ www.sw.kar.nic.in & https://ssp.postmatric.karnataka.gov.in/homepage.aspxಮತ್ತುhttps://ssp.postmatric.karnataka.gov.in/ssppre/ ಇಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ ತಾಲ್ಲೂಕು ಕಚೇರಿ, ದೂ.ಸಂ: 08182-240512 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆ.