SHOCKING : ‘ಚಾಲಕನ ನಿಯಂತ್ರಣ ತಪ್ಪಿ’ ಹೋಟೆಲ್ ಗೆ ಕಾರು ನುಗ್ಗಿ ಓರ್ವ ಸಾವು, ಹಲವರಿಗೆ ಗಾಯ |WATCH VIDEO


ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ್ದು, ಓರ್ವ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ಹಾಪುರದಲ್ಲಿ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ – 9 ರಲ್ಲಿರುವ ರಾಜಾ ಜಿ ಹವೇಲಿ ಹೋಟೆಲ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಹೋಟೆಲ್ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಪ್ರಾಣ ಕಳೆದುಕೊಂಡ ವ್ಯಕ್ತಿ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಆಚರಿಸಲು ಹೋಟೆಲ್ಗೆ ಹೋಗಿದ್ದ ಎನ್ನಲಾಗಿದೆ.

ವರದಿಗಳ ಪ್ರಕಾರ, ಕಾರಿನ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಘಟನೆ ನಡೆದಿದೆ. ಹೋಟೆಲ್ ಹೊರಗೆ ಜನರು ನಿಂತಿದ್ದಾಗ ಇದ್ದಕ್ಕಿದ್ದಂತೆ ಒಂದು ಕಾರು ಅತಿ ವೇಗದಲ್ಲಿ ಬಂದು ಡಿಕ್ಕಿ ಹೊಡೆಯುವುದನ್ನು ವೀಡಿಯೊ ತೋರಿಸುತ್ತದೆ. ಕಾರು ಅಲ್ಲಿ ನಿಂತಿದ್ದ ಹಲವಾರು ಜನರ ಮೇಲೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಲವರು ಹಾರಿ ಬಿದ್ದಿದ್ದಾರೆ .ಪರಾರಿಯಾಗಿದ್ದ ಚಾಲಕನನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read