HomeLatest NewsSHOCKING: ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿ ಸಾವು, ಸಮಗ್ರ ವರದಿ ಸಲ್ಲಿಕೆಗೆ ಸಚಿವ ಈಶ್ವರ್...

SHOCKING: ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿ ಸಾವು, ಸಮಗ್ರ ವರದಿ ಸಲ್ಲಿಕೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕಳೆದ ಐದೂವರೆ ವರ್ಷದಲ್ಲಿ 82 ಹುಲಿಗಳು ಸಾವನ್ನಪ್ಪಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಕುರಿತಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಆಘಾತ ವ್ಯಕ್ತಪಡಿಸಿದ್ದಾರೆ.

ಸಾವನ್ನಪ್ಪಿರುವ ಎಲ್ಲಾ ಹುಲಿಗಳ ಸಾವಿನ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಕುರಿತಾಗಿ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವು ಕಂಡಿವೆ? ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ? ಅಸಹಜವಾಗಿ ಮೃತಪಟ್ಟ ಹುಲಿಗಳ ಸಾವಿಗೆ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆದು ವರದಿ ಬಂದಿದೆಯೇ ಎಂದು ಪ್ರಶ್ನಿಸಿದ್ದಾರೆ.

ಮೃತಪಟ್ಟ ಹುಲಿಗಳಲ್ಲಿ ಯಾವುದಾದರೂ ಅಂಗಾಂಗ ಅಂದರೆ ಉಗುರು, ಹಲ್ಲು ಇತ್ಯಾದಿ ತೆಗೆಯಲಾಗಿದೆಯೇ? ಹುಲಿಗಳ ಹತ್ಯೆ ಆಗಿದ್ದಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆಯೇ? ಆರೋಪಿಗಳನ್ನು ಬಂಧಿಸಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದುವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಎಷ್ಟು ಪ್ರಕರಣಗಳು ತನಿಖೆ ಹಂತದಲ್ಲಿವೆ? ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎನ್ನುವ ಸಂಪೂರ್ಣ ವಿವರವನ್ನು 10 ದಿನದೊಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular