HomeLatest NewsBREAKING: 3 ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದಿದ್ದ ಶಾಸಕ ಇಕ್ಬಾಲ್ ಹುಸೇನ್ ಗೆ...

BREAKING: 3 ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದಿದ್ದ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ಜಾರಿ

ಬೆಂಗಳೂರು: ಮೂರು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇಕ್ಬಾಲ್ ಹುಸೇನ್ ಅವರ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಇಕ್ಬಾಲ್ ಆಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಂದು ವಾರದೊಳಗೆ ಸಮಜಾಯಿಷಿ ನೀಡುವಂತೆ ಇಕ್ಬಾಲ್ ಹುಸೇನ್ ಗೆ ಡಿಕೆ ನೋಟಿಸ್ ನೀಡಿದ್ದಾರೆ.

ಮೂರು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular