IPS ಅಧಿಕಾರಿಗಳ ಅಮಾನತು ರದ್ದು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ, ಕಪಾಳಮೋಕ್ಷ: ವಿಜಯೇಂದ್ರ

ಬೆಂಗಳೂರಿನ RCB ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ್ದ ದುರ್ಘಟನೆಯ ಸಂಬಂಧವಾಗಿ ತನ್ನ ಹೊಣೆಗೇಡಿ ಆಡಳಿತದ ವೈಫಲ್ಯವನ್ನು ಮರೆಮಾಚಿಕೊಳ್ಳಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ನ್ಯಾಯಾಲಯ ರದ್ದುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪ್ರಚಾರದ ತೆವಲಿಗಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಹಠಕ್ಕೆ ಬಿದ್ದು ತೆಗೆದು ಕೊಂಡ ಅವಿವೇಕಿ ನಿರ್ಧಾರದಿಂದಾದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ತನಿಖೆಯನ್ನು ದಿಕ್ಕು ತಪ್ಪಿಸಲು ಕೈಗೊಂಡ ನಿರ್ಧಾರವನ್ನು ಕೇಂದ್ರೀಯ ಆಡಳಿತ್ಮಾಕ ನ್ಯಾಯಾಧಿಕರಣ ವಜಾಗೊಳಿಸಿದೆ.

ಅಮಾಯಕ ಜೀವಗಳನ್ನು ಬಲಿ ಪಡೆದುಕೊಂಡರೂ ಭಂಡತನದ ಪರಮಾವಧಿ ಪ್ರದರ್ಶಿಸುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅಮಾಯಕ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಆದೇಶ ಹಿಂಪಡೆದು, ಅಧಿಕಾರಿಗಳ ಕ್ಷಮೆ ಯಾಚಿಸಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read