HomeLatest Newsಕೈಕೊಟ್ಟ ಪ್ರೇಯಸಿ: ವಿಡಿಯೋ ಹರಿಬಿಟ್ಟು ಯುವಕ ಆತ್ಮಹತ್ಯೆ

ಕೈಕೊಟ್ಟ ಪ್ರೇಯಸಿ: ವಿಡಿಯೋ ಹರಿಬಿಟ್ಟು ಯುವಕ ಆತ್ಮಹತ್ಯೆ

ಚಾಮರಾಜನಗರ: ಪ್ರೀತಿಸಿದ ಯುವತಿ ಕೈಕೊಟ್ಟಿದ್ದರಿಂದ ಯುವಕನೊಬ್ಬ ಮನನೊಂದು ವಿಡಿಯೋ ಹರಿಬಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ.

ಸಂತೋಷ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ವಾಸವಾಗಿದ್ದ ಸಂತೋಷ್ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ಆದರೆ ಯುವತಿ ಬೇರೆ ಹುಡುಗನಿಗೆ ಮೆಸೇಜ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಈತನಿಂದ ದೂರವಾಗಿದ್ದಾಳೆ. ಇದರಿಂದ ಮನನೊಂದು ವಿಡಿಯೋ ಮಾಡಿದ ಸಂತೋಷ್ ವಾಟ್ಸಾಪ್ ನಲ್ಲಿ ತಮ್ಮ ಫೋಟೋಗಳನ್ನು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ.

ಬನ್ನಿತಾಳಪುರ ಗ್ರಾಮದ ಹೊರವಲಯದ ಜಮೀನಿನ ಮರವೊಂದರಲ್ಲಿ ಸಂತೋಷ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತಾಗಿ ಅನುಮಾನ ವ್ಯಕ್ತಪಡಿಸಿ ಆತನ ಸಹೋದರ ಸಂಪತ್ ದೂರು ನೀಡಿದ್ದಾರೆ. ತೆರಕಾಂಬಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular