HomeLatest NewsBIG NEWS: ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ: ರಾಜ್ಯ ಸರ್ಕಾರ ನಿಷೇಧ ಹೇರಿದ...

BIG NEWS: ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ: ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಬೈಕ್ ಟ್ಯಾಕ್ಸಿ ಸೇವೆಗೆ ಕರ್ನಾಟಕ ರಾಜ್ಯ ಸರ್ಕಾರ ನಿಷೇಧ ಹೇರಿದ್ದು, ಅದರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ಹೊತ್ತಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ವಾಣಿಜ್ಯೇತರ ಖಾಸಗಿ ಬೈಕ್ ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಗಳು ಬೈಕ್ ಟ್ಯಾಕ್ಸಿ ಸೇವೆ ನೀಡಬಹುದು. ಆದರೆ, ಇದಕ್ಕೆ ಆಯಾ ರಾಜ್ಯ ಸರ್ಕಾರಗಳ ಅನುಮತಿ ಕಡ್ಡಾಯವೆಂದು ಕೇಂದ್ರ ಸರ್ಕಾರ ಹೇಳಿದ್ದು, ಮಂಗಳವಾರ ಈ ಕುರಿತಾದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವುದು ಇದೇ ಮೊದಲು. ಖಾಸಗಿ ವಾಹನ ಬಳಸಿ ಅಗ್ರಿಗೇಟರ್ ಗಳು ಸೇವೆ ನೀಡಬಹುದು. ಇದಕ್ಕೆ ದೈನಂದಿನ, ವಾರ, ಮಾಸಿಕ ಅವಧಿಗೆ ಸರ್ಕಾರ ಶುಲ್ಕ ವಿಧಿಸಬಹುದು. ಇದರಿಂದ ಸಂಚಾರದಟ್ಟಣೆ, ಮಾಲಿನ್ಯ ನಿಯಂತ್ರಣ, ಅಗ್ಗದ ಪ್ರಯಾಣ ಸಾಧ್ಯ. ಸ್ಥಳೀಯ ಸಾರಿಗೆ ಅಭಿವೃದ್ಧಿ, ಜೀವನ ರೂಪಿಸುವ ಅವಕಾಶ ಮಾಡಿಕೊಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆ 1988ರ ಅಡಿಯ ಮೋಟಾರ್ ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025 ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳು ಖಾಸಗಿ ಬೈಕುಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರುಗಳಿಗೆ ಅನುಮತಿ ಕೊಡಬಹುದು ಎಂದು ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular