ಬೆಂಗಳೂರು : ಬೆಂಗಳೂರಿನಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದ ಹಿನ್ನೆಲೆ ಆರ್ ಟಿ ಒ ಅಧಿಕಾರಿಗಳು ಆಟೋ ಚಾಲಕರಿಗೆ ಬಿಗ್ ಶಾಕ್ ನೀಡಿದ್ದಾರೆ. ಕಾರ್ಯಾಚರಣೆ ನಡೆಸಿ 56 ಆಟೋ ಸೀಜ್ ಮಾಡಿ ಸುಮಾರು 183 ಕೇಸ್ ದಾಖಲಿಸಿದ್ದಾರೆ.
ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದ ಆಟೋಗಳನ್ನು ಮಂಗಳವಾರ ಆರ್ ಟಿ ಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆಟೋ ಚಾಲಕರು ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದಾರೆ.
ಆಟೋ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲು ಕೂಡ ಮುಂದಾಗಿದೆ, ಒಂದು ವೇಳೆ ದರ ಪರಿಷ್ಕರಣೆ ಮಾಡಿದಲ್ಲಿ ಮಿನಿಮಮ್ ಚಾರ್ಜ್ 36 ರೂ. ಆಗಲಿದೆ. ಆನಂತರ ಪ್ರತಿ ಕಿಲೋಮಿಟರ್ ದರ 18 ರೂ.ನಷ್ಟು ಹೆಚ್ಚಳವಾಗಲಿದೆ. ಪ್ರಸ್ತುತ ಮಿನಿಮಮ್ ಚಾರ್ಜ್ 30 ರೂಪಾಯಿ ಇದ್ದು, ನಂತರದ ಪ್ರತಿ ಕಿಲೋ ಮೀಟರ್ ಗೆ 15 ರೂಪಾಯಿ ದರ ನಿಗದಿಪಡಿಸಲಾಗಿದೆ.
You Might Also Like
			TAGGED:RTO		
		
 
			 
		 
		 
		 
		 Loading ...
 Loading ... 
		 
		 
		