BREAKING : ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

ಚೆನ್ನೈ : ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಘಟಕದ ಕಚೇರಿ ಎದುರು 2013 ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಶಂಕಿತ ಉಗ್ರ ನಗೂರ್ ಅಬೂಬಕರ್ ಸಿದ್ದಿಕ್ ನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಮಾತ್ರವಲ್ಲದೇ ಅಡ್ವಾಣಿಯ ರಥಯಾತ್ರೆ ಮೇಲೆ ನಡೆಸಿದ ದಾಳಿ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಉಗ್ರನನ್ನು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಏ.17ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆದ ಸ್ಫೋಟದಲ್ಲಿ 16 ಮಂದಿ ಗಾಯಗೊಂಡಿದ್ದರು. ಹಾಗೂ 2011ರಲ್ಲಿ ಬಿಜೆಪಿಯ ಮುತ್ಸದ್ದಿ ಎಲ್.ಕೆ.ಆಡ್ವಾಣಿ ಅವರ ರಥಯಾತ್ರೆ ಮದುರೈನಲ್ಲಿ ಮೂಲಕ ಸಾಗುವಾಗ ಮಾರ್ಗದಲ್ಲಿ ‘ಪೈಪ್ ಬಾಂಬ್’ ಇರಿಸಿ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು. ಹಿಂದೂ ಕಾರ್ಯಕರ್ತ ಟಿ. ಮುತ್ತುಕೃಷ್ಣನ್ ಅವರ ಕೊಲೆಗೆ ಸಂಬಂಧಿಸಿದ ಸ್ಫೋಟದಲ್ಲಿಯೂ ಭಾಗಿಯಾಗಿದ್ದ. 1999ರಲ್ಲಿ ಚೆನ್ನೈನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸೇರಿದಂತೆ 7 ಕಡೆ ಬಾಂಬ್ ಇರಿಸಿದ ಪ್ರಕರಣದಲ್ಲಿ ಸಿದ್ದಿಕ್ಕಿ ಪ್ರಮುಖ ಪಾತ್ರ ವಹಿಸಿದ್ದನು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read