BREAKING : ಚಾಮರಾಜನಗರದಲ್ಲಿ 20ಕ್ಕೂ ಹೆಚ್ಚು ಮಂಗಗಳ ಮಾರಣಹೋಮ : ವಿಷಪ್ರಾಶನ ಮಾಡಿ ಕೊಂದಿರುವ ಶಂಕೆ!

ಚಾಮರಾಜನಗರ: 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ನಡೆದಿದೆ.

ರಸ್ತೆಯ ಪಕ್ಕದಲ್ಲೇ 20ಕ್ಕೂ ಹೆಚ್ಚು ಮಂಗಗಳ ಮಾರಣಹೋಮ ನಡೆದಿದೆ. ವಿಷಪ್ರಾಶನದಿಂದ ಕೋತಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ್ದವು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ 20ಕ್ಕೂ ಹೆಚ್ಚು ಮಂಗಗಳ ಶವ ಪತ್ತೆಯಾಗಿದ್ದು, ಮಂಗಗಳಿಗೆ ವಿಷಪ್ರಾಶನದ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read