ತೀರ್ಥಹಳ್ಳಿ : ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪ ನಡೆದಿದೆ.
ಮಂಗಳೂರಿನಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿಗೆ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.