BIG NEWS: ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರದಿಂದ ಅನುಮತಿ: ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಬೈಕ್ ಟ್ಯಾಕ್ಸಿ ಸೇವೆಗೆ ರಾಜ್ಯ ಸರ್ಕಾರ ನಿಷೇಧ ಹೇರಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದೆ. ವಾಣಿಜ್ಯೇತರ ಖಾಸಗಿ ಬೈಕ್ ಗಳನ್ನು ಬಳಸಿಕೊಖ್ಂಡು ಸೇವೆ ನೀಡಬಹುದು ಎಂದು ತಿಳಿಸಿದೆ.

ಸಾರ್ವಜನಿಕರಿಗೆ ಅಗ್ರಿಗೇಟರ್ ಗಳು ಬೈಕ್ ಟ್ಯಾಕ್ಸಿ ಸೇವೆ ನೀಡಬಹುದು. ಆದರೆ ಇದಕ್ಕೆ ಆಯಾ ರಾಜ್ಯಗಳ ಅನುಮತಿ ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾರ್ಗಸೂಚಿ:
ರಾಜ್ಯ ಸರ್ಕಾರಗಳು ಖಾಸಗಿ ಬೈಕ್ ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್ ಗಳಿಗೆ ಅನುಮತಿ ನೀಡಬಹುದು
ಇದರಿಂದ ಸಂಚಾರದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದಲ್ಲಿ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನು ರೂಪಿಸಲು ಅವಕಾಶ ಕೊಡಬಹುದು.

ರಾಜ್ಯ ಸರ್ಕಾರಗಳು ಮೋಟಾರು ವಾಹನ್ ಕಾಯ್ದೆಯ 67ರ ಸಬ್ ಸೆಕ್ಷನ್ (3) ಅಡಿಯಲ್ಲಿ ಅಗ್ರಿಗೇಟರ್ ಗಳಿಗೆ ಖಾಸಗಿ ವಾಹನಗಳನ್ನು ಪ್ರಯಾಣಿಕ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು.

ಇದರಡಿ ಅಗ್ರಿಗೇಟರ್ ಗಳು ದೈನಂದಿನ, ವಾರದ, 15 ದಿನಗಳ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read