BIG NEWS: ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ನೋಟಿಸ್: ಇತರ ನಾಯಕರಿಗೂ ಎಚ್ಚರಿಕೆ ನೀಡಿದ ಡಿಸಿಎಂ

ಬೆಂಗಳೂರು: ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಿದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ‌ ಎ‌ದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿದ್ದಾರೆ ಎಂದರು.

ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ, ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಏಕೆ? ಎಂದು ಪ್ರಶ್ನಿಸಿದರು.

ನಾನೊಬ್ಬನೆ‌ ಪಕ್ಷ‌ ಕಟ್ಟಿದ್ದೇನೆಯೇ? ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳೋಣ ಎಂದು ಹೇಳಿದರು.

ಸಚಿವ ಸಂಪುಟ ಸಭೆ ವಿಚಾರವಾಗಿ ನಾಡಪ್ರಭು ಕೆಂಪೇಗೌಡರ ಮಾಗಡಿ ಸ್ಮಾರಕ ಅಭಿವೃದ್ಧಿ ಸೇರಿದಂತೆ ಬೆಂಗಳೂರಿಗೆ ಒಂದಷ್ಟು ಚಿಕ್ಕಪುಟ್ಟ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಇದನ್ನೂ ಪ್ರಸ್ತಾವನೆ ಮಾಡಲಾಗುವುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read