ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತ್ತು ಆದೇಶವನ್ನು ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಕ್ರಮ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಸಿಎಟಿ ಕ್ರಮ ಪ್ರಶ್ನಿಸಿ, ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯಪೀಠ, ತುರ್ತು ವಿಚಾರಣೆಯಾಗಬೇಕು ಎಂಬ ತರಾತುರಿ ಯಾಕೆ? ಎಂದು ಪ್ರಶ್ನಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರಿ ವಿಕಾಸ್ ಕುಮಾರ್ ಅಧಿಕಾರ ವಹಿಸಿಕೊಳ್ಳಲು ಮುಂದಾಗಿದ್ದಾರೆ ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ವಿಭಾಗೀಯ ಪೀಠ ನಾಳೆ ಜುಲೈ 3ರಂದು ವಿಚಾರಣೆ ನಡೆಸಲು ನಿರ್ಧರಿಸಿದೆ.