ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಜೋರು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ. ನಿಮಗ್ಯಾಕೆ ಅನುಮಾನ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂಬ ಸುದ್ದಿಗಾರರ ಹೇಳಿಕೆಗೆ, ಅವರೇನು ನಮ್ಮ ಹೈಕಮಾಂಡಾ? ಎಂದು ಖಾರವಾಗಿ ಪ್ರಶ್ನಿಸಿದರು.
5 ವರ್ಷ ನಾನೇ ಮುಖ್ಯಮಂತ್ರಿ. ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಅನಗತ್ಯ ಹೇಳಿಕೆ ನೀಡುತ್ತಾ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.