ಮಡಿಕೇರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಸಿಖ್, ಪಾರ್ಸಿ, ಜೈನ್, ಬೌಧ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5000ಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ: 08272-220214 ಹಾಗೂ ಇಲಾಖಾ ವೆಬ್‍ಸೈಟ್ www.dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
You Might Also Like
TAGGED:ಶಿಷ್ಯವೇತನ