HomeLatest NewsBREAKING: ಬೆಂಗಳೂರು ಗ್ರಾಮಾಂತರ ಇನ್ಮುಂದೆ 'ಬೆಂಗಳೂರು ಉತ್ತರ': ಹೆಸರು ಬದಲಾವಣೆಗೆ ಸಂಪುಟ ಸಭೆಯಲ್ಲಿ ಸಮ್ಮತಿ

BREAKING: ಬೆಂಗಳೂರು ಗ್ರಾಮಾಂತರ ಇನ್ಮುಂದೆ ‘ಬೆಂಗಳೂರು ಉತ್ತರ’: ಹೆಸರು ಬದಲಾವಣೆಗೆ ಸಂಪುಟ ಸಭೆಯಲ್ಲಿ ಸಮ್ಮತಿ

ಚಿಕ್ಕಬಳ್ಳಾಪುರ: ರಾಮನಗರ ಹೆಸರು ಬದಲಾವಣೆ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಕೂಡ ಬದಲಾವಣೆಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಎಂದು ಮರು ನಾಮಕರಣ ಮಾಡಲು ಕ್ಯಾಬಿನೆಟ್ ನಲ್ಲಿ ಸಮ್ಮತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಕೂಡ ಬದಲಾವಣೆಯಾಗಲಿದೆ. ಬಾಗೇಪಲ್ಲಿಯನ್ನು ‘ಭಾಗ್ಯನಗರ’ ಎಂದು ಹೆಸರು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular