ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟಕ್ಕೆ ನಾಲ್ವರು ಸರ್ಕಾರಿ ಅಧಿಕಾರಿಗಳು ಬಲಿಯಾಗಿರುವ ಘಟನೆ ನಡೆದಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಜೌರ್ ನ ಖರ್ ತೆಹಸೀಲ್ ನ ಮೇಳ ಮೈದಾನದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ, ಘಟನೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸೇರಿ ನಾಲ್ವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಬಜೌರ್ ಜಿಲ್ಲೆಯ ನವಗಾಯ್ ತೆಹ್ಸಿಲ್ ನ ಸಹಾಯಕ ಆಯುಕ್ತ ಫೈಸಲ್ ಸುಲ್ತಾನ್ ಅವರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ವಕೀಲ್ ಖಾನ್, ಕಾನ್ಸ್ ಟೆಬಲ್ ರಶೀದ್ ಖಾನ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಭದ್ರತಾ ಪಡೆಗಳು ತಕ್ಷಣ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.