ಬೆಂಗಳೂರು: ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ಮುಂದುವರೆದು, ಈ ಕೆಳಕಂಡ ಅಧಿಕಾರಿಗಳನ್ನು ನಮೂದಿಸಿರುವ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.
ರೋಹಿಣಿ ಸಿಂಧೂರಿ ದಾಸರಿ –ಉಡುಪಿ, ಡಾ. ಎಂ.ವಿ.ವೆಂಕಟೇಶ- ಚಾಮರಾಜನಗರ, ನವೀನ್ ರಾಜ್ ಸಿಂಗ್ –ಹಾಸನ, ಸಮೀರ್ ಶುಕ್ಲಾ –ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ.

