ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಮುಂದುವರೆದಿದ್ದು, ನಿನ್ನೆ ರಾತ್ರಿ ಮತ್ತೊಬ್ಬರು ಮೃತಪಟ್ಟಿದ್ದಾರೆ.
ಹಾಸನ ನಗರದ ಕರೀಗೌಡ ಕಾಲೋನಿಯ ಸಂಪತ್ ಕುಮಾರ್ ಎದೆ ನೋವಿನಿಂದ ಸಾವನ್ನಪ್ಪಿದ್ದಾರೆ. ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಂಪತ್ ಕುಮಾರ್ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಸಂಖ್ಯೆ 28ಕ್ಕೆ ಏರಿಕೆ ಆಗಿದೆ. 43 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 28 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ.