HomeLatest NewsBREAKING: ಇದು ಯುದ್ಧದ ಯುಗವಲ್ಲ, ಸಂಘರ್ಷಗಳಿಂದ ಸಮಸ್ಯೆಗೆ ಪರಿಹಾರ ಸಿಗಲ್ಲ: ಘಾನಾ ದೇಶದಲ್ಲಿ ಪ್ರಧಾನಿ ಮೋದಿ...

BREAKING: ಇದು ಯುದ್ಧದ ಯುಗವಲ್ಲ, ಸಂಘರ್ಷಗಳಿಂದ ಸಮಸ್ಯೆಗೆ ಪರಿಹಾರ ಸಿಗಲ್ಲ: ಘಾನಾ ದೇಶದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಅಕ್ರಾ(ಘಾನಾ): ಇದು ಯುದ್ಧದ ಯುಗವಲ್ಲ, ಸಂಘರ್ಷಗಳಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಘಾನಾ ರಾಜಧಾನಿ ಅಕ್ರಾದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುದ್ಧ, ಸಂಘರ್ಷದ ಬದಲು ಶಾಂತಿಯುತ ಮಾತುಕತೆ ನಡೆಸಬೇಕು. ರಾಜತಾಂತ್ರಿಕತೆ ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಷ್ಯಾ –ಉಕ್ರೇನ್, ಇರಾನ್-ಇಸ್ರೇಲ್ ಯುದ್ಧದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮೋದಿ, ಇದು ಯುದ್ಧದ ಯುಗವಲ್ಲ, ಸಂಘರ್ಷಗಳಿಂದ ಪರಿಹಾರ ಸಿಗುವುದಿಲ್ಲ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಘಾನಾದ ರಾಷ್ಟ್ರೀಯ ಗೌರವ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರದಾನ ಮಾಡಲಾಯಿತು.  ಮೋದಿ ಅವರ ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವವನ್ನು ಗುರುತಿಸಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular