HomeLatest Newsಉದ್ಯೋಗ ವಾರ್ತೆ : ರಾಜ್ಯದ ‘ಆರೋಗ್ಯ ಇಲಾಖೆ’ಯಲ್ಲಿ ‘6770’ ಡಿ- ಗ್ರೂಪ್ ಹುದ್ದೆಗಳ ಭರ್ತಿಗೆ ಸರ್ಕಾರ...

ಉದ್ಯೋಗ ವಾರ್ತೆ : ರಾಜ್ಯದ ‘ಆರೋಗ್ಯ ಇಲಾಖೆ’ಯಲ್ಲಿ ‘6770’ ಡಿ- ಗ್ರೂಪ್ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ |GOVT JOB

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರು ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ(2)ರ ಏಕ ಕಡತದಲ್ಲಿ ದಿನಾಂಕ:09.01.2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯವಲಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ರೋಗಿಗಳ ಹಿತದೃಷ್ಠಿಯಿಂದ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಹೆಚ್ಚಿನ/ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ಗ್ರೂಪ್-ಡಿ ಖಾಲಿ ಹುದ್ದೆಗಳಿಗೆ ಎದುರಾಗಿ ಪಡೆದುಕೊಳ್ಳುತ್ತಿರುವ ಶೇ 75 % ರಷ್ಟರ ಬದಲಿಗೆ ಶೇ 100% ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿರುವುದಾಗಿ ಪ್ರಸ್ತಾಪಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳ ಪೈಕಿ ಶೇಕಡ 80 ರಷ್ಟು (80%) ಹುದ್ದೆಗಳನ್ನು ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಈ ಕೆಳಗಿನ ಷರತ್ತುಗಳಿಗೊಳಪಡಿಸಿ ಅನುಮತಿ ನೀಡಿ ಆದೇಶಿಸಿದೆ.

ಷರತ್ತುಗಳು:-

  1. ಶೇಕಡ 80 ರಷ್ಟು (80%) ಹುದ್ದೆಗಳಲ್ಲಿ ಶೇ.40 ರಷ್ಟು ನಾನ್-ಕ್ಲಿನಿಕಲ್ ಹುದ್ದೆಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ (Service Contract) ಹಾಗೂ ಶೇ.40 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ (Out Source) ಭರ್ತಿ ಮಾಡಲು ಕ್ರಮವಹಿಸತಕ್ಕದ್ದು.
  2. ಆಯುಕ್ತರು ರಾಜ್ಯವಲಯದ ಪ್ರತಿ ಕಛೇರಿ / ತಾಲ್ಲೂಕು / ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಮಾಣಿತ ಸಿಬ್ಬಂದಿ ಮಾದರಿಯನ್ನು (Standard Staffing Pattern)
    ಅಳವಡಿಸಿಕೊಳ್ಳಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆಯನ್ನು ಪಡೆಯತಕ್ಕದ್ದು.
  3. ಇಲಾಖೆಗೆ ಒದಗಿಸಲಾದ ಅನುದಾನದಲ್ಲಿ ಸುಮಾರು ರೂ. 50.00 ಕೋಟಿ ರೂಪಾಯಿಗಳ ಪುನರ್ವಿನಿಯೋಗಕ್ಕಾಗಿ (re-appropriation) ಗುರುತಿಸಿ ಪ್ರಸ್ತಾವನೆಯನ್ನು ಸಲ್ಲಿತಕ್ಕದ್ದು.
  4. ಸರ್ಕಾರದ ಆದೇಶ ಸಂಖ್ಯೆ: ಆಕುಕ 81 ಹೆಚ್ಎಸ್ಎಂ 2025, ದಿನಾಂಕ: 22-5-2025 ರಲ್ಲಿನ ಮಾನದಂಡ / ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಖಾಲಿಯಿರುವ ಹುದ್ದೆಗಳ ಎದುರಾಗಿ ಗುತ್ತಿಗೆ / ಹೊರಗುತ್ತಿಗೆ ಮುಖಾಂತರ ಹುದ್ದೆಗಳನ್ನು ಭರ್ತಿ ಮಾಡತಕ್ಕದ್ದು.
    ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 38 ಎಫ್.ಆರ್.ಸಿ. 2025 (1653051), ದಿನಾಂಕ: 10-06-2025 ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular