BIG NEWS : 2025 ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಜಿ ಆಹ್ವಾನ |National Level Best Teacher” Award 2025 ”

ಬೆಂಗಳೂರು : 2025 ನೇ ಸಾಲಿನ ” ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ” ನಿಗದಿತ ಅವಧಿಯಲ್ಲಿ ಆನ್-ಲೈನ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ನಿಯಮಾನುಸಾರ ಸೂಕ್ತ ಕ್ರಮವಹಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಕ್ಷೇತ್ರಕ್ಕೆ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶಿಕ್ಷಕರು ನೀಡಿರುವ ಅನನ್ನ ಸೇವೆಯನ್ನು ಸ್ಮರಿಸಿ, ಅಂತಹ ಅತ್ಯುತ್ತಮ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅದರಂತೆ ಕ್ರಮವಹಿಸುವ ಉದ್ದೇಶದಿಂದ, 2025 ನೇ ಸಾಲಿನ ” ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು (https://nationalawardstoteachers.education.gov.in) ಮೂಲಕ ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅವಕಾಶ

ಕಲ್ಪಿಸಿರುತ್ತದೆ.

ಉಲ್ಲೇಖಿತ ಪತ್ರ & ಅದರೊಂದಿಗಿನ ಪೂರಕ ದಾಖಲೆಗಳನ್ನು ಯಥಾವತ್ತಾಗಿ ಈ ಪತ್ರದೊಂದಿಗೆ ಲಗತ್ತಿಸಿದೆ. ಅದರಂತೆ, ಸದರಿ ವಿಷಯದ ಕುರಿತು ವ್ಯಾಪಕ ಪ್ರಚಾರದ ಮೂಲಕ ರಾಜ್ಯದ ಅರ್ಹ ಅರ್ಜಿದಾರರ ಗಮನಕ್ಕೆ ತಂದು ರಾಜ್ಯದಿಂದ ಅರ್ಹರು ಹೆಚ್ಚಿನ ಸಂಖ್ಯೆಯಲ್ಲಿ (ಪ್ರತಿ ಜಿಲ್ಲೆಯಿಂದ ಕನಿಷ್ಠ 50-60 ಮಂದಿ) ನಿಗದಿತ ಅವಧಿಯೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೆಳಕಂಡ ಅಂಶಗಳಂತೆ ಕ್ರಮವಹಿಸುವಂತೆ ಅರ್ಹ ಅರ್ಜಿದಾರರಿಗೆ, ಶಾಲಾ / ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಲಾಗಿದೆ ಮತ್ತು ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಇವರನ್ನು ಕೋರಲಾಗಿದೆ.

ಅರ್ಹ ಅರ್ಜಿದಾರರಿಗೆ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ.
ಉಲ್ಲೇಖಿತ ಪತ್ರ ಹಾಗೂ ಅದರೊಂದಿಗಿನ ಪೂರಕ ದಾಖಲೆಗಳು ಮತ್ತು ತತ್ಸಂಬಂಧಿ (https://nationalawardstoteachers.education.gov.in) ជ ಅಂಶಗಳಂತೆ ಕೆಳಕಂಡವರು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ 2025 ” ಪ್ರಶಸ್ತಿಗೆ ಆಯ್ಕೆಯಾಗ ಬಯಸಿ ನಿಗದಿತ ಅವಧಿಯಲ್ಲಿ ಆನ್-ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

  1. ರಾಜ್ಯ ಸರ್ಕಾರದ, ರಾಜ್ಯ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮತ್ತು ರಾಜ್ಯ ಸರ್ಕಾರಕ್ಕೆ/ರಾಜ್ಯ ಮಂಡಳಿಗೆ ಸಂಯೋಜನೆಗೊಂಡಿರುವ (ರಾಜ್ಯ ಸರ್ಕಾರದಿಂದ ನೋಂದಣಿ & ಮಾನ್ಯತೆ ಪಡೆದಿರುವ) ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿನ /ಪದವಿ ಪೂರ್ವ ಕಾಲೇಜುಗಳಲ್ಲಿನ ಖಾಯಂಗೊಂಡ ಮತ್ತು ಮನೆಪಾಠದಲ್ಲಿ ತೊಡಗಿಸಿಕೊಂಡಿರದ ಹಾಗೂ ಕನಿಷ್ಟ 10 ವರ್ಷಗಳ ಸೇವೆಯನ್ನು ಪೂರೈಸಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು.
  2. ಕೇಂದ್ರ ಸರ್ಕಾರದ ಮತ್ತು ಸಿ.ಬಿ.ಎಸ್.ಇ ಹಾಗೂ ಸಿ.ಐ.ಎಸ್.ಸಿ.ಇ ಸಂಯೋಜನೆ ಪಡೆದಿರುವ / ಮಾನ್ಯತೆ ಪಡೆದ ಶಾಲೆಗಳ/ಪದವಿ ಪೂರ್ವ ಕಾಲೇಜುಗಳ ಖಾಯಂಗೊಂಡ ಮತ್ತು ಮನೆಪಾಠದಲ್ಲಿ ತೊಡಗಿಸಿಕೊಂಡಿರದ ಹಾಗೂ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರೈಸಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು.
  3. ಈ ಕ್ಯಾಲೆಂಡರ್ ವರ್ಷದಲ್ಲಿ ಕನಿಷ್ಟ ನಾಲ್ಕು ತಿಂಗಳು ಅಂದರೆ, ದಿನಾಂಕ: 30-04-2025 ರವರೆಗೆ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮೇಲ್ಕಂಡ ಶಾಲೆಗಳ/ಪದವಿ ಪೂರ್ವ ಕಾಲೇಜುಗಳ ಖಾಯಂಗೊಂಡಿದ್ದ ಮತ್ತು ಮನೆಪಾಠದಲ್ಲಿ ತೊಡಗಿಸಿಕೊಂಡಿರದಿದ್ದ ಹಾಗೂ ಕನಿಷ್ಟ 10 ವರ್ಷಗಳ ಸೇವೆಯನ್ನು ಪೂರೈಸಿದ್ದ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು.
    ಮೇಲ್ಕಂಡವರು “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ – 2025 ” ಪ್ರಶಸ್ತಿಗೆ ಆಯ್ಕೆಯಾಗ ಬಯಸಿ ಆನ್-ಲೈನ್ ಮೂಲಕ ಕೆಳಕಂಡಂತೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read