ನಾಗರೀಕರಿಗೆ ಗುಡ್ ನ್ಯೂಸ್: ಸಮಸ್ಯೆ ಪರಿಹಾರಕ್ಕೆ ಬಿಡಿಎ ನೂತನ ಸಹಾಯಕೇಂದ್ರ ಆರಂಭ

ಬೆಂಗಳೂರು: ನಾಗರೀಕರ ಕುಂದು ಕೊರತೆ ಆಲಿಸಿ ಸಮಸ್ಯೆಗೆ ಪರಿಹಾರ ಒದಗಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA) ನೂತನ ಸಹಾಯ ಕೇಂದ್ರ ಆರಂಭಿಸಿದೆ.

ಸಾರ್ವಜನಿಕರಿಂದ ಸ್ವೀಕರಿಸುವ ಯಾವುದೇ ಕೋರಿಕೆ, ಮನವಿ, ದೂರುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ನೇಹಿ ತಂತ್ರಾಂಶ ಅಳವಡಿಸಲಾಗಿದೆ. ಈ ಸಾರ್ವಜನಿಕರ ಕೊಂದು ಕೊರತೆ ನಿವಾರಣಾ ವ್ಯವಸ್ಥೆ(ಐ.ಪಿ.ಜಿ.ಆರ್.ಎಂ.ಎಸ್. ವೆಬ್ ಆ್ಯಪ್) ಇಲ್ಲವೇ ನಾಗರಿಕ ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 94831 66622 ಗೆ ಕರೆ ಮಾಡಬಹುದು. ಅಥವಾ ಪ್ರಾಧಿಕಾರಕ್ಕೆ ನೇರವಾಗಿ ಭೇಟಿ ನೀಡಿ ತಮ್ಮ ಅಹವಾಲು ಸಲ್ಲಿಸಬಹುದು.

ಸಾರ್ವಜನಿಕರಿಂದ ಸಲ್ಲಿಕೆಯಾದ ಅಹವಾಲುಗಳನ್ನು ಪರಿಶೀಲಿಸಿ 30 ದಿನದೊಳಗೆ ಪರಿಹಾರ ಒದಗಿಸಲಾಗುವುದು. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಹಿಂಬರಹ ನೀಡಿ ಅರ್ಜಿಯನ್ನು ಮುಕ್ತಾಯಗೊಳಿಸಲಾಗುವುದು. 30 ದಿನಗಳಲ್ಲಿ ಕೈಗೊಂಡ ಪರಿಹಾರ ಕ್ರಮ ತೃಪ್ತಿಕರವಾಗದಿದ್ದಲ್ಲಿ ಅಂತಹ ಪ್ರಕರಣಗಳನ್ನು ಪ್ರತಿ ಗುರುವಾರ ವಲಯವಾರು ನಡೆಯುವ ಸಾರ್ವಜನಿಕರ ಸಮಕ್ಷಮದಲ್ಲಿ ದೂರು, ಮನವಿಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎನ್ನಲಾಗಿದೆ. ಪ್ರಾಧಿಕಾರದ ಕಾರ್ಯದರ್ಶಿಯನ್ನು ಈ ಹೊಸ ವ್ಯವಸ್ಥೆಯ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read