ಕನ್ನಡ ಸಾಹಿತ್ಯ ಪರಿಷತ್ ಅವ್ಯವಹಾರ ತನಿಖೆಗೆ ಆದೇಶ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ದುರುಪಯೋಗ ಮತ್ತು ಆಡಳಿತಾತ್ಮಕ ನಡೆ ಕುರಿತು ವಿಚಾರಣೆಗೆ ಸಹಕಾರ ಇಲಾಖೆ ಬೆಂಗಳೂರು ನಗರ ಸಹಕಾರ ಸಂಘಗಳ ಉಪನಿಬಂಧಕರನ್ನು ವಿಚಾರಣಾ ಅಧಿಕಾರಿಯನ್ನಾಗಿ ನೇಮಕ ಮಾಡಿದೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ಕೆಲಸಕ್ಕೆ ಮೀಸಲಾದ ಅನುದಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪದ ಕುರಿತು ಸಮಗ್ರ ತನಿಖೆಗೆ ತನಿಖಾಧಿಕಾರಿ ನೇಮಿಸಿರುವ ಸಂಘಗಳ ಜಿಲ್ಲಾ ಉಪ ನೋಂದಣಾಧಿಕಾರಿ 45 ದಿನದೊಳಗೆ ವರದಿ ಸಲ್ಲಿಸುವಂತೆ ತಿಳಿಸಿದೆ.

ಸರ್ಕಾರ ಕನ್ನಡದ ಕೆಲಸಕ್ಕಾಗಿ ಸಾಹಿತ್ಯ ಪರಿಷತ್ ಗೆ ಸಾಕಷ್ಟು ಅನುದಾನ ಒದಗಿಸುತ್ತಿದ್ದು, ಈ ಅನುದಾನ ಬಳಕೆ ಮಾಡಿಕೊಂಡಿರುವ ಕುರಿತು ಪರಿಷತ್ ವಾರ್ಷಿಕ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಸಾಕಷ್ಟು ಅನುಮಾನಗಳಿದ್ದು, ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ, ಹಾವೇರಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಸಲ್ಲಿಸದೆ ಹಣ ದುರುಪಯೋಗ ಮಾಡಿಕೊಂಡಿರುವುದು ಸೇರಿದಂತೆ ವಿವಿಧ ಆರೋಪ ಕೇಳಿ ಬಂದಿವೆ.

ದೂರುಗಳ ಆಧರಿಸಿ ತನಿಖೆಗೆ ಆದೇಶಿಸಿರುವ ಸಹಕಾರ ಸಂಘಗಳ ಜಿಲ್ಲಾ ಉಪ ನೋಂದಣಾಧಿಕಾರಿ ಸಹಕಾರ ಸಂಘಗಳ ಉಪ ನಿಬಂಧಕ ಪಿ. ಶಶಿಧರ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದಲ್ಲಿ 2022 -23ರಿಂದ ಇದುವರೆಗೆ ಕೈಗೊಂಡ ಹಲವು ನಿರ್ಧಾರಗಳು, ಹಣಕಾಸಿನ ದುರುಪಯೋಗ ಅಂಶಗಳ ಕುರಿತು ವಿಚಾರಣಾಧಿಕಾರಿ ವಿಚಾರಣೆ ನಡೆಸಲಿದ್ದಾರೆ. ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ನೀಡಿರುವ ಅನುದಾನದಲ್ಲಿ ಹಣ ದುರುಪಯೋಗ, ವಾಹನಗಳ ಖರೀದಿ/ ಮಾರಾಟದಲ್ಲಿ ಹಣ ದುರುಪಯೋಗ ಸೇರಿ 17 ಅಂಶಗಳನ್ನು ಒಳಗೊಂಡ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ 45 ದಿನದೊಳಗೆ ವರದಿ ಸಲ್ಲಿಸಲು ಸಹಕಾರ ಇಲಾಖೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read