ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಕ್ಷೀಣಿಸಿದ್ಧ ಮುಂಗಾರು ಮಳೆಯ ಆರ್ಭಟ ಮತ್ತೆ ಚುರುಕಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ.
ಜು. 3ರಿಂದ ಒಂದು ವಾರ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.3ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಜು. 4ರಿಂದ 9 ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 3ರಂದು ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೀದರ್, ಧಾರವಾಡ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 4 ಮತ್ತು 5ರಂದು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.