ಕಲಬುರಗಿ: ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ರೈತ ಬಲಿಯಾಗಿದ್ದಾರೆ.
ಸಂತೋಷ್ ಇಂಡಿ (36) ಹೃದಯಾಘಾತದಿಂದ ಮೃತಪಟ್ಟಿರುವ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದ ಸಂತೋಷ್ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಗದೇ ಸಾವನ್ನಪ್ಪಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಲೋ ಬಿಪಿಯಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.