ಯಾದಗಿರಿ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿರುವ ನಡುವೆಯೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ.
ಹಾಸನದ ಬಳಿಕ ಶಿವಮೊಗ್ಗ, ಕಲಬುರಗಿ, ದಾವಣಗೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಣ್ಣ ವಯಸ್ಸಿನವರೂ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಇದೀಗ ಯಾದಗಿರಿ ಸರದಿ. ಯಾದಗಿರಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಾದಗಿರಿಯ ಕೆಂಭಾವಿ ನಿವಾಸಿ ತಮ್ಮಣ್ಣ (50) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.