ಉಡುಪಿ: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆ ವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಈಶ್ವರ ನಗರದಲ್ಲಿ ಈ ದುರಂತ ಸಂಭವಿಸಿದೆ. ಮೊಮ್ಮಕ್ಕಳನ್ನು ಮಗಳ ಮನೆಗೆ ಬಿಟ್ಟು ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ವೇಳೆಯೇ ಬಸ್ ಡಿಕ್ಕಿಯಾಗಿದೆ. ವೃದ್ಧೆಯ ಮೇಲೆ ಬಸ್ ಹರಿದು ಹೋಗಿದೆ. ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ್ದಾರೆ.
ವಿನೋಧ ಸಿಸ್ಟರ್ (70) ಮೃತರು. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.