ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಗೂಂಡಾಗಿರಿ ನಡೆಸಿರುವ ಘಟನೆ ನಡೆದಿದೆ. ಸರ್ವೆ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಗ್ಗೆ ಬೆಂಗಳೂರಿನ ಸಾರ್ವಭೌಮ ನಗರದಲ್ಲಿ ಈ ಘಟನೆ ನಡೆದಿದೆ. ನಂದೀಶ್ ಎಂಬುವವರ ಮೇಲೆ ಪಾಲಿಕೆ ಸಿಬ್ಬಂದಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಸಿಬ್ಬಂದಿಯ ಗೂಂಡಾ ವರ್ತನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮನೆ ಮಾಲೀಕರ ಮಾಹಿತಿ ಪಡೆಯದೇ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಸಿಬ್ಬಂದಿಗಳು ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.