HomeLatest NewsBREAKING : ಚಲಿಸುತ್ತಿದ್ದ 'ಉದಯಪುರ್ ಎಕ್ಸ್ ಪ್ರೆಸ್' ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ದುರಂತ.!

BREAKING : ಚಲಿಸುತ್ತಿದ್ದ ‘ಉದಯಪುರ್ ಎಕ್ಸ್ ಪ್ರೆಸ್’ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ದುರಂತ.!

ರಾಮನಗರ: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉದಯಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.

ಎಕ್ಸ್ ಪ್ರೆಸ್ ರೈಲಿನ ಎಂಜೀನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ರೈಲನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಲಾಗಿದ್ದು, ಬೆಂಕಿ ನಂದಿಸಲಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular