ಬೆಂಗಳೂರು : ಶಾಲಾ ಬಸ್ ಬಂತು ಎಂದು ಅವಸರವಾಗಿ ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ನಗರದ ಜಿಗಣಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬಾಲಕ ಖುಷಿ ಖುಷಿಯಿಂದ ಶಾಲಾ ವಾಹನ ಏರಲು ಆತುರವಾಗಿ ರಸ್ತೆ ದಾಟಿದ್ದಾನೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬಸ್ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಚಾಲಕ ಬಾಲಕನನ್ನು ನೋಡಿದರೂ ಬಸ್ ನಿಲ್ಲಿಸದೇ ಹೋಗಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸದ್ಯ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.