BIG NEWS: ಎಂಎಲ್ ಸಿ ರವಿಕುಮಾರ್ ಮನಃಸ್ಥಿತಿ ಎಂಥಾದ್ದು ಎಂಬುದು ತೋರುತ್ತಿದೆ; ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದು. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆ ಬಿಜೆಪಿ ಎಂ ಎಲ್ ಸಿ ಸಿ.ಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ. ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read