ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಲವಂತದಿಂದ, ಮದುವೆಯಾಗಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಆರೋಪಿಸಿದ್ದಾರೆ.
ಹರೀಶ್ ಬಾಬು (33) ಎಂಬ ಡೇಟಾ ಎಂಟ್ರಿ ಆಪರೇಟರ್ ಕೋಲಾರ ಜಿಲ್ಲಾಸ್ಪತ್ರೆಯ ಇಎನ್ ಟಿ ವಿಭಾಗದ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಪ್ರಕರಣದ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಹರೀಶ್ ಬಾಬು ನಿನ್ನೆಯಷ್ಟೇ ಶಿವರಂಜಿನಿ ಎಂಬುವವರನ್ನು ವಿವಾಹವಾಗಿದ್ದರು. ಕೋಲಾರ ಉಪ ನೋಂದಣಿ ಕಚೇರಿಯಲ್ಲಿ ವಿವಾಹವಾಗಿ ಬಂದಿದ್ದರು.
ಶಿವರಂಜಿನಿ ಕೂಡ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ. ಆದರೆ ಹರೀಶ್ ಬಾಬು ತಾಯಿ ಹೇಳುವ ಪ್ರಕಾರ ಇದು ಬಲವಂತದ ಮದುವೆ. ಅದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.
ಮದುವೆಯಾಗಿ ಜಿಲ್ಲಾಸ್ಪತ್ರೆಗೆ ಕೆಲಸಕ್ಕೆ ಹಾಜರಾಗಿದ್ದ ಹರೀಶ್ ಬಾಬು ರಾತ್ರಿ ಮಧ್ಯಸೇವನೆ ಮಾಡಿ 11 ಗಂಟೆ ಸುಮಾರಿಗೆ ಇಎನ್ ಟಿ ವಿಭಾಗದ ಕೊಠಡಿಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಬಲವಂತವಾಗಿ ಮದುವೆ ಮಾಡಿದ್ದಕ್ಕೆ ಮಗ ಸಾವನ್ನಪ್ಪಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ. ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.