ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅಭ್ಯರ್ಥಿಯು ಇಂಜಿನಿಯರಿಂಗ್ ಪದವೀಧರರಾಗಿರಬೇಕು.
ಆಸಕ್ತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್ -1), ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು -560 064 ಇಲ್ಲಿಗೆ ಜುಲೈ 04ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-28461351 ಅಥವಾ ಇ-ಮೇಲ್ tswdblr.north@gmail.com ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.