ನವದೆಹಲಿ: ಡಾಬರ್ ಚವನಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತು ಪ್ರಕಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಪತಂಜಲಿ ಸಂಸ್ಥೆಗೆ ನಿರ್ಬಂಧ ವಿಧಿಸಿದೆ.
ಪತಂಜಲಿ ಸಂಸ್ಥೆ ತನ್ನ ವಿರುದ್ಧ ನೀಡುತ್ತಿರುವ ಅವಹೇಳನಕಾರಿ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪತಂಜಲಿ ಸಂಸ್ಥೆಗೆ ಡಾಬರ್ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡದಂತೆ ನಿರ್ಬಂಧ ವಿಧಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 14ಕಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.