ಚಿತ್ರದುರ್ಗ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದಂತಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಹಾರ್ಟ್ ಅಟ್ಯಾಕ್ ನಿಂದಾಗಿ ಸಾಲು ಸಾಲು ಸಾವುಗಳು ಸಂಭವಿಸಿವೆ. ಇದೀಗ ಉದ್ಯಮಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಉದ್ಯಮಿ ವೀರಭದ್ರಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದವರಾದ ವೀರಭದ್ರಪ್ಪ, ಎದೆನೋವು ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿಗೆ ಆಗಮಿಸಿ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದರು. ಹೃದಯಾಘಾತದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಇಂದು ವೀರಭದ್ರಪ್ಪ ಕೊನೆಯುಸಿರೆಳೆದಿದ್ದಾರೆ.