ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರು ಕೆಂಡ ಕಾರಿದ್ದಾರೆ. ರವಿಕುಮಾರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಕೆಲವರಿಗೆ ಅವಮಾನ ಮಾಡುವುದೇ ಹವ್ಯಾಸವಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ರವಿಕುಮಾರ್ ಹೇಳಿಕೆ ಖಂಡನೀಯ. ಕೆಲವರಿಗೆ ಅಪಮಾನ ಮಾಡುವುದು, ಆರೋಪಗಳನ್ನು ಮಾಡುವುದೇ ಹವ್ಯಾಸವಾಗಿಬಿಟ್ಟಿದೆ.
ರವಿಕುಮಾರ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇನ್ಮುಂದಾದರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಬಿಜೆಪಿ ನಾಯಕರು ತಮ್ಮ ಮಾತುಗಳ ಮೇಲೆ ಹಿಡಿತವಿಟ್ಟುಕೊಳ್ಳಲಿ ಎಂದು ಹೇಳಿದರು.