ದಾವಣಗೆರೆ: ಟ್ರ್ಯಾಕ್ಟರ್- ಬೈಕ್ ಡಿಕ್ಕಿಯಾಗಿ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಬಳಿ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿ(45) ಮೃತಪಟ್ಟವರು. ಎಸ್ಪಿ ಕಚೇರಿಯಲ್ಲಿ ಗುರುಮೂರ್ತಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಗುರುಮೂರ್ತಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.