HomeLatest NewsBREAKING: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ...

BREAKING: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಲೋಕಾಯುಕ್ತ ಠಾಣೆಯಲ್ಲಿ FIR

ಶಿವಮೊಗ್ಗ: ಮಾಜಿ ಉಪಮುಖ್ಯಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಕೆ.ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಕಾಂತೇಶ್ ಅವರ ಪತ್ನಿ ಶಾಲಿನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈಶ್ವರಪ್ಪ, ಅವರ ಪುತ್ರ, ಸೊಸೆ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ವಿನೋದ್ ಖಾಸಗಿ ದೂರು ದಾಖಲಿಸಿದ್ದು, ಶಿವಮೊಗ್ಗ ನ್ಯಾಯಾಲಯದ ಆದೇಶದಂತೆ ಕೇಸ್ ದಾಖಲಿಸಲಾಗಿದೆ. ನಾಳೆ ಬೆಳಗ್ಗೆ ಕಚೇರಿಗೆ ಬರುವಂತೆ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದ್ದಾರೆ. ಸದ್ಯ ಈಶ್ವರಪ್ಪ ಕುಟುಂಬ ಕೇರಳ ಪ್ರವಾಸದಲ್ಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular