ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅಸಂಸದೀಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಐಎಎಸ್ ಅಧಿಕಾರಿಗಳ ಸಂಘದಿಂದ ಮನವಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ಸರ್ಕಾರದ ಎಸಿಎಸ್ ಗೌರವ್ ಗುಪ್ತಾ, ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹಾಗೂ ಖುಷ್ಬು ಗೋಯಲ್ ಚೌಧರಿ ಅವರನ್ನೊಳಗೊಂಡ ನಿಯೋಗ ಮನವಿ ಸಲ್ಲಿಸಿದೆ.
ರವಿಕುಮಾರ್ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ರವಿಕುಮಾರ್ ಸಾರ್ವಜನಿಕವಾಗಿ ಮತ್ತು ಬೇಷರತ್ ಆಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ. ರವಿಕುಮಾರ್ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಷತ್ ನಲ್ಲಿ ಅವರ ಹೇಳಿಕೆಯನ್ನು ಖಂಡಿಸಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಐಎಎಸ್ ಅಧಿಕಾರಿಗಳ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.