ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡ 87,909 ಅಭ್ಯರ್ಥಿಗಳ ರ್ಯಾಂಕ್ ಮತ್ತು ಪಡೆದ ಅಂಕಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಅತಿ ಹೆಚ್ಚು 670 ಅಂಕ ಪಡೆದ ಅಭ್ಯರ್ಥಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ, 113 ಅಂಕ ಪಡೆದ ವ್ಯಕ್ತಿ ಕೊನೆಯಲಿದ್ದು, ಅವರು ಕೂಡ ಅರ್ಹತೆ ಪಡೆದುಕೊಂಡಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನೀಡಿದ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#UGNEET-25ರ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909 ಅಭ್ಯರ್ಥಿಗಳ NEET Rank ಮತ್ತು Score ವಿವರಗಳನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಕೆಳಗಿನ ಲಿಂಕ್ ಒತ್ತಿ ಮಾಹಿತಿ ಪಡೆಯಬಹುದು.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) July 3, 2025
UGNEET_MERIT_LIST_2025kannada.pdf https://t.co/rakuhq9Rog…