ಬೆಂಗಳೂರು: ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.
ಬಿಬಿಎಂಪಿ ವ್ಯಾಪ್ತಿಯ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತನೆ ಮಾಡುವುದು. ರಾಜ್ಯದಲ್ಲಿ ಕಂದಾಯ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವ ಕುರಿತು ಗುರುವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಇದರೊಂದಿಗೆ ರಾಜ್ಯಾದ್ಯಂತ ಸಿಸಿ, ಒಸಿ ಇಲ್ಲದ ವಾಣಿಜ್ಯ ಮತ್ತು ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಿರುವುದರಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಾಗಿದ್ದು, ಇವೆಲ್ಲವುಗಳ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಸಚಿವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.