HomeLatest NewsSHOCKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ: ಕುಸಿದು ಬಿದ್ದು ಯುವಕ ಸಾವು: ಮೃತರ ಸಂಖ್ಯೆ 34ಕ್ಕೆ...

SHOCKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ: ಕುಸಿದು ಬಿದ್ದು ಯುವಕ ಸಾವು: ಮೃತರ ಸಂಖ್ಯೆ 34ಕ್ಕೆ ಏರಿಕೆ

ಹಾಸನ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಹಾಸನ ಹೊರವಲಯದ ಚಿಕ್ಕಕೊಂಡಗುಳದಲ್ಲಿ 21 ವರ್ಷದ ಯುವಕ ಮದನ್ ಮೃತಪಟ್ಟಿದ್ದಾರೆ.

ಮೃತ ಮದನ್ ಹಾಸನ ತಾಲೂಕಿನ ಚಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ತಾಯಿಯ ಜೊತೆಗೆ ಚನ್ನಪಟ್ಟಣದಲ್ಲಿ ವಾಸವಾಗಿದ್ದ ಮದನ್ ಎರಡು ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದರು. ರಾತ್ರಿ ಮನೆಯಲ್ಲಿದ್ದಾಗ ಎದೆ ನೋವಿನಿಂದ ಮದನ್ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular