ನವದೆಹಲಿ : ದೆಹಲಿಯಲ್ಲಿ ಇನ್ಮುಂದೆ 15 ವರ್ಷ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪೂರೈಸುವುದಿಲ್ಲ ಎಂದು ಸರ್ಕಾರ ತಿಳಿಸಿತ್ತು, ಆದರೆ ಈ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾದ ನಿರ್ಬಂಧ ವಾಪಸ್ ಪಡೆಯಲಾಗಿದೆ.
15 ವರ್ಷ ಹಳೆಯ ವಾಹನಗಳ ಮೇಲಿನ ಪೆಟ್ರೋಲ್ ಮತ್ತು ಡೀಸೆಲ್ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ದೆಹಲಿಯಲ್ಲಿ ಜಾರಿಗೆ ತಂದಿದ್ದ ಈ ನಿಯಮವನ್ನು ಸಾರ್ವಜನಿಕರ ಆಕ್ರೋಶದಿಂದಾಗಿ ಹಿಂಪಡೆಯಲಾಗಿದೆ.
ತಾಂತ್ರಿಕ ಸವಾಲುಗಳ ಕಾರಣ ಹಳೇ ವಾಹನಗಳ ಮೇಲಿನ ಇಂಧನ ನಿಷೇಧವು ಕಾರ್ಯ ಸಾಧ್ಯವಲ್ಲ. ಇದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಿರ್ಧಾರದ ಬದಲು ಮಾಲಿನ್ಯಕಾರಕ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.
15 ವರ್ಷ ಹಳೆಯ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಡೀಸೆಲ್ ವಿತರಿಸಲ್ಲ.
ಹಳೆಯ ವಾಹನಗಳನ್ನು ಗುರುತಿಸಲು ವಿಶೇಷ ತಂಡ ರಚನೆ ಮಾಡಲಾಗುವುದು. ಮಾಲಿನ್ಯ ನಿಯಂತ್ರಣಕ್ಕೆ ಹೋಟೆಲ್ ಗಳಲ್ಲಿ ಹೊಗೆ ನಿರೋಧಕ ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದು ಈ ಮೊದಲು ಸರ್ಕಾರ ತಿಳಿಸಿತ್ತು.