21 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ನೂತನ ಅಧ್ಯಕ್ಷರ ಆಯ್ಕೆಗೆ ವೀಕ್ಷಕರ ನೇಮಕ

ಬೆಂಗಳೂರು: ರಾಜ್ಯದ 21 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರ ನೇಮಕಾತಿಗೆ ಪಕ್ಷ ತೀರ್ಮಾನಿಸಿದೆ. ಈ ಕುರಿತಾಗಿ ಹಿರಿಯ ಮುಖಂಡರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಒಂದು ಅಥವಾ ಒಂದಕ್ಕಿಂತ ಹೆಚ್ಚು ಅವಧಿಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಎಎಸಿಸಿ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ವೀಕ್ಷಕರನ್ನು ನೇಮಕ ಮಾಡಿದ್ದಾರೆ.

ಪಕ್ಷದ ಸಂಬಂಧಿಸಿದ ಜಿಲ್ಲೆಯ ಎಲ್ಲಾ ಮುಖಂಡರ ಸಭೆ ನಡೆಸಕು, ಅಭಿಪ್ರಾಯ ಪಡೆದು ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಆದ್ಯತಾ ಕ್ರಮದಲ್ಲಿ ತಲಾ ಎರಡು ಅಥವಾ ಮೂರು ಹೆಸರುಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ವೀಕ್ಷಕರಿಗೆ ಸೂಚನೆ ನೀಡಲಾಗಿದೆ.

ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಚಿಕ್ಕೋಡಿ, ಬಾಗಲಕೋಟೆ, ಬಳ್ಳಾರಿ ಗ್ರಾಮೀಣ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮೀಣ, ಗದಗ, ಹಾಸನ, ಕಲಬುರಗಿ, ಕೋಲಾರ, ಮಂಡ್ಯ, ಮೈಸೂರು ನಗರ, ಮೈಸೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು ಹಾಗೂ ಉಡುಪಿ ಜಿಲ್ಲೆಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read