ಶಿವಮೊಗ್ಗ : ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳವೆಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಜನರಲ್ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಅಶ್ವಿನ್ ಹೆಬ್ಬಾರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಮ್ಸ್ ಕಾಲೇಜು ಪ್ರೊಫೆಸರ್ ಡಾ. ಅಶ್ವಿನ್ ಹೆಬ್ಬಾರ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು, ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ನೀಡಿದ್ದು, ಪ್ರೊಫೆಸ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಪ್ರಕರಣ ದಾಖಲಾಗುತ್ತಿದ್ದಂತೆ ಪ್ರೊಫೆಸರ್ ಡಾ.ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದರು. ಪ್ರೊಫೆಸರ್ ನನ್ನು ಬಂಧಿಸುವಂತೆ ಆಗ್ರಹಿಸಿ ಸಿಮ್ಸ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆದಿದ್ದರು. ನಂತರ ಅವರನ್ನು ಬಂಧಿಸಲಾಗಿತ್ತು.
You Might Also Like
TAGGED:ಅಶ್ವಿನ್ ಹೆಬ್ಬಾರ್