ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಸಿಇಎನ್ ಠಾಣೆ ಪೊಲೀಸರು ಬೇಧಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ತಮ್ಮ ಮಕ್ಕಳ ಡ್ರಗ್ಸ್ ಅಡಿಕ್ಟ್ ಬಗ್ಗೆ ಇಬ್ಬರು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೋಷಕರ ದೂರಿನ ಮೇರೆಗೆ ಡ್ರಗ್ಸ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ತುಷಾರ್( 21) ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತ ಆರೋಪಿಗಳು.
ಮಂಗಳೂರಿನ ಪಡುಶೆಡ್ಡೆ ಗ್ರಾದ ಹಾಲಾಡಿ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಜ್ಜಾಗುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷದ 20 ಸಾವಿರ ಮೌಲ್ಯದ ಗಾಅಂಜಾ ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತುಗಳನ್ನು ಮಾರುತ್ತಿದ್ದರು ಎಂದು ತಿಳಿದುಬಂದಿದೆ.