ಮಂಗಳೂರು : ಮಂಗಳೂರಿನಲ್ಲಿ ಬೃಹತ್ ಗಾಂಜಾ ಜಾಲ ಪತ್ತೆಯಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸೆನ್ ಕ್ರೈಮ್ ಠಾಣೆ ಪೊಲೀಸರು ಬೃಹತ್ ಡ್ರಗ್ಸ್ ಜಾಲ ಪತ್ತೆ ಮಾಡಿದ್ದಾರೆ.
ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಆರೋಪಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡಿದ್ದರು ಎಂಬ ವಿಚಾರ ಬಯಲಾಗಿದೆ. ತಮ್ಮ ಮಕ್ಕಳು ಡ್ರಗ್ಸ್ ಗೆ ಅಡಿಕ್ಟ್ ಆಗಿದ್ದರು ಎಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ್ದರು.ಪೋಷಕರ ದೂರಿನ ಮೇರೆಗೆ ಡ್ರಗ್ಸ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ತುಷಾರ್( 21) ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತ ಆರೋಪಿಗಳು. ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳೂರಿನ ಪಡುಶೆಡ್ಡೆ ಗ್ರಾದ ಹಾಲಾಡಿ ಬಳಿ ಮಾದಕ ವಸ್ತುಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷದ 20 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.