ರಾಂಚಿ: ಮರಳು ಅಕ್ರಮ, ಅಕ್ರಮ ಗಣಿಗಾರಿಕೆ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರ್ಖಂಡ್ ಮಾಜಿ ಸಚಿವ ಯೋಗೇಂದ್ರ ಸಾವೋ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯೋಗೇಂದ್ರ ಸಾವೋ ಹಾಗೂ ಅವರ ಕುಟುಂಬಕ್ಕೆ ಸೇರಿದ ವಿವಿಧ ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಜಾರಿಬಾಗ್, ರಾಂಚಿಯಲ್ಲಿ 8 ಸ್ಥಳಗಳ ಮೇಲೆ ದಾಳಿ ನಡೆದಿದೆ.
ಮಾಜಿ ಕೃಷಿ ಸಚಿವ ಯೋಗೇಂದ್ರ ಸಾವೋ ಕಾಂಗ್ರೆಸ್ ನಾಯಕರಾಗಿದ್ದು, ಅವರ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ, ಭೂಕಬಳಿಕೆ, ಸುಲಿಗೆ ಆರೋಪ ಕೇಳಿಬಂದಿದ್ದು, ಅಕ್ರಮ ಹಣ ವರ್ಗಾವಣೆ ಮಾಡಿರುವ ಕೇಸ್ ಕೂಡ ದಾಖಲಾಗಿದೆ ಈ ಹಿನ್ನೆಲೆಯಲ್ಲಿ ತನಿಖೆಯ ಭಾಗವಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.